ಜಿಲ್ಲೆ

ಉತ್ತಮ ವೈದ್ಯಕೀಯ ಸೇವೆಗೆ ಆದ್ಯತೆ

ಬೀದರ್: ಜಿಲ್ಲೆಯ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಕಲ್ಪಿಸುವುದು ನನ್ನ ಆದ್ಯತೆಯಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜ್ಞಾನೇಶ್ವರ ನಿರಗುಡೆ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಪದಾಧಿಕಾರಿಗಳಿಂದ ನಗರದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಮಳೆಗಾಲ ಇರುವ ಕಾರಣ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಪಾಟೀಲ, ಪ್ರಧಾನ ಕಾರ್ಯದರ್ಶಿ ಗಿರೀಶ್ ಬಿರಾದಾರ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸುದೀಪ್ ಮತ್ತಿತರರು ಇದ್ದರು.