ಜಿಲ್ಲೆ

ಉತ್ತಮ ಸಂಬಂಧದಿಂದ ಭವ್ಯ ಭಾರತ ನಿರ್ಮಾಣ ಸಾಧ್ಯ

Mysuru Rural

ರಾವಂದೂರು: ಮಕ್ಕಳು, ಶಿಕ್ಷಕರು ಹಾಗೂ ಪಾಲಕರ ನಡುವೆ ಉತ್ತಮ ಸಂಬಂಧವಿದ್ದಾಗ ಮಾತ್ರ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್ ಹೇಳಿದರು.

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಶುಕ್ರವಾರ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಹಿರಿಯ ಪ್ರಾಥಮಿಕ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ ಪಾಲಕರ ಸಭೆ ಉದ್ಘಾಟಿಸಿ ಮಾತನಾಡಿದರು.

ಶಾಲಾ ಮಕ್ಕಳು ಅಪೌಷ್ಟಿಕತೆಗೊಳಗಾಗಬಾರದು ಎಂಬ ಕಾರಣಕ್ಕೆ ಬಿಸಿಯೂಟ ಯೋಜನೆಯನ್ನು ಜಾರಿಗೆ ತರಲಾಯಿತು. ಇದರಿಂದ ಮಕ್ಕಳ ಆರೋಗ್ಯವು ವೃದ್ಧಿಸುವುದರ ಜತೆಗೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹೆಚ್ಚಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧಕ ಯೋಗೇಶ್ ಮಾತನಾಡಿ, ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮ ಶಾಲೆಗಳಲ್ಲಿ ಮೊದಲ ಬಾರಿಗೆ ತಾಲೂಕಿನ 6 ಶಾಲೆಗಳಲ್ಲಿ ನಡೆಯಲಿದೆ. ಸರ್ಕಾರದ ಆದೇಶದಂತೆ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದ್ದು ಇದರಿಂದ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ನೋಡಲ್ ಅಧಿಕಾರಿ ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್ ಮಾತನಾಡಿದರು. ಶಾಲೆ ಮುಖ್ಯ ಶಿಕ್ಷಕಿ ಲಿಲ್ಲಿಮೇರಿ, ಎಸ್‌ಡಿಎಂಸಿ ಸದಸ್ಯರಾದ ರಾಜೇಂದ್ರ, ಸುರೇಶ್, ಲೆಕ್ಕಪರಿಶೋಧಕರಾದ ಅಭಿಷೇಕ್, ಇಂದಿರಾ, ಸುಕನ್ಯಾ ಹಾಜರಿದ್ದರು.