ಕಾಳಗಿ: ಜನರ ಸೇವೆಗಾಗಿಯೇ ಸರ್ಕಾರಿ ನೌಕರರು ಕೆಲಸ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ದೊರೆತಾದ ನಿರೀಕ್ಷೆಗೂ ಮೀರಿ ಕೆಲಸ ಮಾಡಲು ಸಾಧ್ಯ ಎಂದು ಜಿ¯್ಲÁಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.
ಶ್ರೀ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಮ್ಮೆಲ್ಲ ಸಮಸ್ಯೆಗಳು ನನ್ನ ಗಮನಕ್ಕೆ ಬಂದಿವೆ. ಎಲ್ಲವುದಕ್ಕೂ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಅಭಿವೃದ್ಧಿ ಕಾರ್ಯಕ್ಕೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ. ಇನ್ನು ಅಧಿಕಾರಿಗಳು ಜನರನ್ನು ಗೌರವದಿಂದ ಕಂಡು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಮಾತನಾಡಿ, ಸಮಾಜ ಘಾತುಕ ಕೃತ್ಯ, ಅಕ್ರಮ ಗಣಿಗಾರಿಕೆ, ಗಾಂಜಾ ಮಾರಾಟ, ಮಟ್ಕಾ, ಜೂಜಾಟ, ಮಹಿಳೆಯರ ಮೇಲೆ ಅತ್ಯಾಚಾರ, ಮದ್ಯ ಸಾಗಾಟ, ಕಳ್ಳತನ, ಕಿರುಕುಳ, ಆಸ್ತಿ-ಪಾಸ್ತಿ ಹಾನಿ ಸೇರಿ ಯಾವುದೇ ಸಮಸ್ಯೆಗಳಿದ್ದರೂ ತP್ಷÀಣ ಇಲಾಖೆಗೆ ಗಮನಕ್ಕೆ ತನ್ನಿ. ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪೆÇಲೀಸರು ಕೆಲಸ ಮಾಡುತ್ತಿದ್ದಾರೆ ಎಂದರು.
ಜಿಪಂ ಯೋಜನಾ ನಿರ್ದೇಶಕ ಜಗದೇವಪ್ಪ, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಡಿವೈಎಸ್‍ಪಿ ಶಂಕರಗೌಡ ಪಾಟೀಲ್, ತಹಸೀಲ್ದಾರ್ ಘಮಾವತಿ ರಾಠೋಡ್, ಗ್ರೇಡ್-2 ತಹಸೀಲ್ದಾರ್ ರಾಜೇಶ್ವರಿ, ತಾಪಂ ಇಒ ವಿಲಾಸ, ಪಪಂ ಮುಖ್ಯಾಧಿಕಾರಿ ಪಂಕಜಾ, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‍ಐ ವಿಶ್ವನಾಥ ಬಾಕಳೆ ಇತರರಿದ್ದರು.
ಪಿಂಚಣಿ, ರೇಶನ್, ಆಯುಷ್ಮಾನ್ ಭಾರತ್ ಕಾರ್ಡ್, ಭಾಗ್ಯಲಕ್ಷ್ಮೀ ಬಾಂಡ್, ಪೌರ ಕಾರ್ಮಿಕರಿಗೆ ರೇನ್ ಕೋಟ್, ರೈತರಿಗೆ ಮೇವಿನ ಬೀಜ, ಸಸಿಗಳನ್ನು ವಿತರಿಸಲಾಯಿತು.