ಜಿಲ್ಲೆ

ಉತ್ತರ ಕನ್ನಡದಲ್ಲಿ ಬಂದ್ ಇಲ್ಲ..ಪ್ರತಿಭಟನಾ ಮೆರವಣಿಗೆ

ಕಾರವಾರ: ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟ ದೇಶವ್ಯಾಪಿ‌ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಜಿಲ್ಲೆಯಲ್ಲಿ ಕೆಲ ಸಂಘಟನೆಗಳು ಬೆಂಬಲ ನೀಡಿವೆ.

ಆದರೆ, ಬ್ಯಾಂಕ್ ಹೊರತುಪಡಿಸಿ ಯಾವುದೇ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಸಂಚಾರ ಬಂದಾಗಿರಲಿಲ್ಲ.

ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಕೆಲಸ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಿಎಸ್ ಎನ್ಎಲ್, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಾರವಾರದ ಮಾಲಾದೇವಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಪ್ರಮುಖ ಬೀದಿಗಳನ್ನು ಹಾಯ್ದು, ಜಿಲ್ಲಾಧಿಕಾರಿ ಕಚೇರಿ ತಲುಪಿತು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.