ಮೈಸೂರು: ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು ಕೂಬಿಂಗ್ ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡ ಮುಸ್ಲಿಮರು ನಿನ್ನೆ ಅಕ್ರಮಣ ಮಾಡಿದ್ದಾರೆ. ಮೈಸೂರಿನಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆದಿದೆ. ಪೊಲೀಸರನ್ನೇ ಗುರಿಯಾಗಿಸಿಕೊಂಡು ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ ಮುಂದುವರಿದಿದೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯನವರ ಆಡಳಿತ ಹೇಗಿದೆ ಎಂಬುದಕ್ಕೆ ಇದು ಸಾಕ್ಷಿ. ಇದು ಕನ್ನಡಿಗರ ಸರ್ಕಾರ ಅಲ್ಲ. ಇದು ತಾಲಿಬಾನಿ ಸರ್ಕಾರ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದನ್ನು ಮೊದಲು ಬಿಡಬೇಕು. ಪುಂಡ ಮುಸ್ಲಿಮರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಅದಕ್ಕೇ ಈ ರೀತಿಯ ಗಲಾಟೆ ಆಗಿದೆ ಎಂದೂ ದೂರಿದರು.
ಅರವಿಂದ್ ಕೇಜ್ರಿವಾಲ್ ಸೋತರೆ ಉದಯಗಿರಿಯ ಮುಸ್ಲಿಮರಿಗೆ ಏಕೆ ರೋಷ ಬರುತ್ತದೆ? ಅವರ ಮನೆಯಲ್ಲಿ ಏಕೆ ಸೂತಕ ಬರುತ್ತದೆ? ಎಂದು ಪ್ರಶ್ನಿಸಿದ ಅವರು, ಪುಂಡ ಮುಸ್ಲಿಮರಿಗೆ ಬುದ್ಧಿ ಕಲಿಸಿ, ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು ಕೂಬಿಂಗ್ ಮಾಡಬೇಕು.
ಸಿದ್ದರಾಮಯ್ಯ ಅವರು ಎಷ್ಟು ದಿನ ಸಿಎಂ ಆಗಿ ಇರುತ್ತಾರೋ ಗೊತ್ತಿಲ್ಲ. ಈಗಲಾದರೂ ಖಡಕ್ ಆಗಿ ಕೆಲಸ ಮಾಡಲಿ ಎಂದರು. ಸಿದ್ದರಾಮಯ್ಯ ಎಷ್ಟು ಅಸಮರ್ಥ ಸಿಎಂ ಎಂಬುದಕ್ಕೆ ಅವರ ತವರೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ ಎಂದು ಹೇಳಿದರು.