ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿದರು. 
ಜಿಲ್ಲೆ

ಉದ್ಯಮ ಪ್ರಾರಂಭಿಸದಿದ್ದಲ್ಲಿ ಜಾಗ ವಾಪಸಿಗೆ ಕ್ರಮ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೋಂದಾಯಿತ ಕೈಗಾರಿಕಾ ಉದ್ಯಮಗಳಿಗೆ ಹಂಚಿಕೆಯಾಗಿರುವ ಜಾಗದಲ್ಲಿ ನಿಯಮಾನುಸಾರ ಉದ್ದಿಮೆಯನ್ನು ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ನೀಡಿರುವ ಜಾಗವನ್ನು ವಾಪಸು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೋಂದಾಯಿಸಿರುವ ಉದ್ದಿಮೆದಾರರು ಸರ್ಕಾರದ ನಿಯಮಾನುಸಾರ ಪಡೆದಿರುವ ಜಾಗದಲ್ಲಿ ಮುಂದಿನ ಮೂರು ತಿಂಗಳಲ್ಲಿ ಗುರುತಿಸಲಾದ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆಯನ್ನು ಆರಂಭಿಸಬೇಕು ಹಾಗೂ ಜಾಗಕ್ಕೆ ಅರ್ಜಿ ಸಲ್ಲಿಸಿರುವವರು ಸಂಬAಧಪಟ್ಟ ಎಲ್ಲಾ ದಾಖಲಾತಿಗಳು ಹಾಗೂ ನಿಗದಿಪಡಿಸಿದ ಹಣವನ್ನು ಜಮಾ ಮಾಡಿ ಜಾಗ ಪಡೆದು ಕೈಗಾರಿಕೆ ಆರಂಭಿಸಬೇಕು. ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ವಿದ್ಯುತ್, ಚರಂಡಿ, ನೀರು, ರಸ್ತೆ ಮತ್ತಿತರ ಎಲ್ಲಾ ಸೌಲಭ್ಯಗಳನ್ನು ನೀಡಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕೈಗಾರಿಕೋದ್ಯಮಿಗಳಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುದ್ರಾ ಯೋಜನೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವಂತೆ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆಗಳು ಹೆಚ್ಚು ಹೆಚ್ಚು ಆರಂಭವಾಗುವುದರಿAದ ನಿರುದ್ಯೋಗ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಯುವ ಉದ್ದಿಮೆದಾರರು ಮುಂದೆ ಬರಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಸ್ಪೆÊಸ್ ಪಾರ್ಕ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ವಿಸ್ತÈತ ಯೋಜನಾ ವರದಿಯನ್ನು ಸಲ್ಲಿಸಿ ಮಂಜೂರಾತಿ ದೊರಕಿ ಹಣ ಬಿಡುಗಡೆಯಾಗಿದೆ. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಹಲಸಿನ ಕ್ಲಸ್ಟರ್ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಭೂಮಿ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಕೆಎಸ್‌ಎಫ್‌ಸಿ ಮತ್ತು ಬ್ಯಾಂಕ್‌ಗಳಿAದ ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ ಹಣಕಾಸು ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಡೂರು ನಗದಿಯಾತ್ ಕಾವಲ್‌ನಲ್ಲಿ ಅಭಿವೃದ್ಧಿಯಾಗಿರುವ ಕೈಗಾರಿಕೆಗೆ ನಿಯಮದಂತೆ ಲಭ್ಯವಿರುವ ಭೂಮಿ ಹಂಚಿಕೆ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಟೆಕ್ಸ್ಟೈಲ್ ಪಾರ್ಕ್ ಅಭಿವೃದ್ದಿಗೆ ಕಡೂರು ತಾಲೂಕು ಕಸಬಾ ಹೋಬಳಿಯ ಚೀಲನಹಳ್ಳಿ ಗ್ರಾಮದ ಸರ್ವೇ ನಂ. ೫೩ ರಲ್ಲಿ ೧೩ ಎಕರೆ ಹಾಗೂ ಸರ್ವೇ ನಂ. ೫೪ ರಲ್ಲಿ ೧೨ ಎಕರೆ ಸೇರಿ ಒಟ್ಟು ೨೫ ಎಕರೆ ಜಮೀನನ್ನು ಜವಳಿ ಪಾರ್ಕ್ ಸ್ಥಾಪನೆಗೆ ಮಂಜೂರಾಗಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿ ಹಿರೇಗೌಜ ಗ್ರಾಮದ ಸರ್ವೇ ನಂ.೧೧೧ ರಲ್ಲಿ ೧೫ ಎಕರೆ ಜಾಗವನ್ನು ಜವಳಿ ಪಾರ್ಕ್ಗೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಮಹೇಶ್‌ಕುಮಾರ್, ಕೆಐಎಡಿಬಿ, ಕೆಎಸ್‌ಎಫ್‌ಸಿ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಭಾಗವಹಿಸಿದ್ದರು.