ಬೈಲಹೊಂಗಲ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅಮಿತ ವಿಶ್ವನಾಥ ಪಾಟೀಲ ಮಾತನಾಡಿದರು. ಸಂತೋಷ ಹರಕುಣಿ, ವಿನಯ ಪಾಟೀಲ, ಪ್ರತಾಪ ಹಡಗಿನಾಳ ಇದ್ದರು. 
ಜಿಲ್ಲೆ

ಉದ್ಯೋಗಮೇಳದ ಸದುಪಯೋಗ ಪಡೆಯಿರಿ

Belagavi

ಬೈಲಹೊಂಗಲ: ಡಾ.ವಿಶ್ವನಾಥ ಪಾಟೀಲ ಅಭಿಮಾನಿ ಬಳಗ, ಕೆಆರ್‌ಸಿಇಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಡಿ.10 ರಂದು ಬೆಳಗ್ಗೆ 9:30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಟ್ಟಣದ ಕೆಆರ್‌ಸಿಇಎಸ್ ಮಹಾ ವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಅಮಿತ ವಿಶ್ವನಾಥ ಪಾಟೀಲ ಹೇಳಿದರು. ಸ್ಥಳೀಯ ಗೃಹ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಯುವಕರಿಗೆ ಉದ್ಯೋಗ ಕಲ್ಪಿಸಬೇಕೆನ್ನುವ ಮಹಾದಾಸೆಯಿಂದ ಪ್ರತಿಷ್ಠಿತ 15 ಕಂಪನಿಗಳ ಮುಖ್ಯಸ್ಥರನ್ನು ಸಂಪರ್ಕಿಸಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 1,500 ಕ್ಕೂ ಅಧಿಕ ಉದ್ಯೋಗಾವಕಾಶ ದೊರೆಯುವ ನಿರೀಕ್ಷೆಯಿದೆ. ಯುವಜನತೆ ಸದುಪಯೋಗ ಪಡೆದುಕೊಳ್ಳಬೇಕೆಂದರು. ಉದ್ಯೋಗಾಕಾಂಕ್ಷಿಗಳು ಬರುವಾಗ ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ, ಪದವಿ ಮಾರ್ಕ್ಸಕಾರ್ಡ್, ಆಧಾರ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.