ಮಡಿಕೇರಿ: ಪ್ರಸಕ್ತ(2022-23) ಸಾಲಿನಲ್ಲಿ ಜಿಲ್ಲೆಯ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಗಾರೆಕೆಲಸ ಹಾಗೂ ಮರಗೆಲಸ ಉಪಕರಣಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಗ್ರಾಮ ಪಂಚಾಯತಿ ಪಿಡಿಒ ಅವರಿಂದ ಕಸುಬು ದೃಢೀಕರಣ ಪತ್ರ, ಕಾರ್ಮಿಕ ಇಲಾಖೆಯಿಂದ ಉಪಕರಣವನ್ನು ಪಡೆದಿಲ್ಲವೆಂದು ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್ ಪ್ರತಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಮಾ.9ರೊಳಗೆ ಉಪನಿರ್ದೇಶಕರು(ಖಾಗ್ರಾ), ಗ್ರಾಮೀಣ ಕೈಗಾರಿಕಾ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ-571201 ವಿಳಾಸಕ್ಕೆ ಸಲ್ಲಿಸಬೇಕು. ನಿಗದಿತ ಸಮಯದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.08272-228113ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕ(ಖಾಗ್ರಾ) ಸಿ.ಎನ್.ರಘು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.