ಜಿಲ್ಲೆ

ಉಪಚುನಾವಣೆಗೆ ಅಧಿಸೂಚನೆ

ಚಾಮರಾಜನಗರ: ವಿವಿಧ ಕಾರಣಗಳಿಂದ ತೆರವಾಗಿರುವ ಯಳಂದೂರು ಪಟ್ಟಣ ಪಂಚಾಯಿತಿಯ 5ನೇ ವಾರ್ಡ್ (ಪರಿಶಿಷ್ಟ ಜಾತಿ) ಹಾಗೂ ಹನೂರು ಪಟ್ಟಣ ಪಂಚಾಯಿತಿಯ 12ನೇ ವಾರ್ಡ್ (ಸಾಮಾನ್ಯ ಮಹಿಳೆ) ತಲಾ ಒಂದು ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಸೂಚನೆ ಹೊರಡಿಸಿದ್ದಾರೆ.

ನಾಮಪತ್ರ ಸಲ್ಲಿಸಲು ನ.11 ಕೊನೆಯ ದಿನವಾಗಿದೆ. 12ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ನ.14 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನ.23ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ನ.25ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಕಾರ್ಯವು ಆಯಾ ತಾಲೂಕು ಕೇಂದ್ರ ಸ್ಥಳದಲ್ಲಿ ನ.26ರಂದು ಬೆಳಗ್ಗೆ 8 ಗಂಟೆಯಿಂದ ನಡೆಯಲಿದೆ. ನ.26ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ.