ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಹಾಗೂ ಸಿಬಿಎಸ್‌ಸಿಯಲ್ಲಿ ಶೇ.76ಕ್ಕಿಂತ ಅಂಕ ಗಳಿಸಿದ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನಗರದ ಕಲಾಮಂದಿರದಲ್ಲಿ ನವೆಂಬರ್ 6ರಂದು ಆಯೋಜಿಸುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜನಾಂಗದವರು, ಅಂತಿಮ ಪದವಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳು, ಬಡ್ತಿ ಹೊಂದಿದ, ನಿವೃತ್ತರಾದ ನೌಕರರು, ಚುನಾಯಿತ ಪ್ರತಿನಿಧಿಗಳು, ಸಮಾಜ ಸೇವಕರನ್ನು ಸನ್ಮಾನಿಸಲಾಗುವುದು. ಆಸಕ್ತರು ಸೆ.20ರೊಳಗೆ ಲಿಂಗಣ್ಣ, ಪ್ರಧಾನ ಕಾರ್ಯದರ್ಶಿ, ನಂ.2793, 2ನೇ ಮುಖ್ಯರಸ್ತೆ, 2ನೇ ತಿರುವು, ಜಯನಗರ, ಮೈಸೂರು-14. ಇಲ್ಲಿಗೆ ಮಾಹಿತಿ ಕಳುಹಿಸಬಹುದು. ಮಾಹಿತಿಗೆ 9980906469 ಅನ್ನು ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ಜವರಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.