ಮಂಗಳೂರು: ಉಳ್ಳಾಲದ ರಾಣಿ ಅಬ್ಬಕ್ಕ ವೃತ್ತದ ಬಳಿಯ ಆಲಿಯಾ ನರ್ಸಿಂಗ್ ಇನ್‌ಸ್ಟಿಟ್ಯೂಟ್‌ನ 48 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾಲೇಜು ಮತ್ತು ಹಾಸ್ಟೆಲ್ ಎರಡನ್ನೂ ಸೀಲ್‌ಡೌನ್ ಮಾಡಿದೆ.
ಈ ಎಲ್ಲ ವಿದ್ಯಾರ್ಥಿಗಳು ಕೇರಳದವರಾಗಿದ್ದು, ನರ್ಸಿಂಗ್ ಪರೀಕ್ಷೆ ಬರೆಯಲು ಬಂದು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಕಾಲೇಜಿನಲ್ಲಿ ನೂರು ವಿದ್ಯಾರ್ಥಿಗಳಿದ್ದು, ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 48 ಮಂದಿಗೆ ಪಾಸಿಟಿವ್ ಬಂದಿದೆ. ಆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಉಳ್ಳಾಲ ನಗರ ಸಭೆ ಅಧಿಕಾರಿಗಳು ಬುಧವಾರ ಸೀಲ್‌ಡೌನ್ ಮಾಡಿದ್ದಾರೆ.