ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎಂ ಆರ್ ದೇವರಾಜ ಶೆಟ್ಟಿ, ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಪ್ರತಿನಿಧಿಯಾಗಿ ಕೆ.ಪಿ. ವೆಂಕಟೇಶ್ ಆಯ್ಕೆಯಾಗಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಟಿ.ಚೇತನ್ ಕುಮಾರ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಎಂ.ಆರ್.ದೇವರಾಜ ಶೆಟ್ಟಿ ಎರಡನೆ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಅಧ್ಯಕ್ಷರಾದ ದೇವರಾಜ ಶೆಟ್ಟಿ ಅವರನ್ನು ಮಾಜಿ ಸಚಿವ ಡಿ.ಎನ್.ಜೀವರಾಜ್, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್ ಮತ್ತಿತರರು ಅಭಿನಂದಿಸಿದರು.