ಕಲಬುರಗಿ: ಮಹಾರಾಷ್ಟçದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗಳ ಚಾಲಕರು, ನಿರ್ವಾಹಕರ ಮೇಲೆ ದಾಳಿ ನಡೆಸಿ, ಕಪ್ಪು ಮಸಿ ಬಳೆಯುವುದು, ಹಲ್ಲೆ ಮಾಡುವುದು ಸೇರಿ ದುಷ್ಕೃತ್ಯಗಳಲ್ಲಿ ತೊಡಗಿರುವ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಟೈರ್‌ಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜ್ಯದ ಬಸ್ ಚಾಲಕರ ಮೇಲೆ ಹಲ್ಲೆ ಮಾಡಿ, ಕಪ್ಪು ಮಸಿ ಬಳೆದ ಎಂಇಎಸ್ ಪುಂಡರ ವಿರುದ್ಧ ಪ್ರಕರಣ ದಾಖಲಿಸಬೇಕು, ಮಹಾಜನ್ ವರದಿ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ವೇದಿಕೆ ಕಕ ಅಧ್ಯಕ್ಷ ಅಭಿಷೇಕ ಬಾಲಾಜಿ, ಕಕ ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟಿಕಾರ, ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ್, ಪ್ರಮುಖರಾದ ಮನೋಹರ ಬೀರನೂರ, ಮಂಜು ಕುಸನೂರ, ವಿಜಯಕುಮಾರ ಅಂಕಲಗಿ, ಅನೀಲ ಗಾಯಕವಾಡ, ಶರಣು ದ್ಯಾಮ, ಬಸವರಾಜ ಅಂಬಲಗಿ, ಸುನೀಲ ಸಿಂಗೆ, ರಾಜಶೇಖರ ಬಂಟನೂರ, ದೀಪಕ ಶಹಾಪುರಕರ್ ಇತರರಿದ್ದರು.