ಜಿಲ್ಲೆ

ಎಚ್ ಡಿ ಸಿ ಸಿ ಬ್ಯಾಂಕಿಗೆ ಐಟಿ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

ಹಾಸನ :  ನಗರದ ಬಿ.ಎಂ ರಸ್ತೆಯಲ್ಲಿರುವ ಎಚ್ ಡಿ ಸಿ ಸಿ ಬ್ಯಾಂಕಿಗೆ ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ಐಟಿ ಅಧಿಕಾರಿಗಳ ತಂಡ ಆಗಮಿಸಿ ಲೆಕ್ಕಪತ್ರಗಳನ್ನು ಪರಿಶೀಲನೆ ನಡೆಸಿದೆ.

ಚುನಾವಣೆ ಸಂದರ್ಭದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬ್ಯಾಂಕಿನಲ್ಲಿ ತಪಾಸನೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬ್ಯಾಂಕ್ ಮಾಜಿ ಸಚಿವ ಎಚ್.ಡಿ.ರೇವಣ್ಣನ ಅವರ ಹಿಡಿತದಲ್ಲಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ.

ಬೆಳಗ್ಗೆಯಿಂದ ಸಂಜೆವರೆಗೂ ಕೂಡ ಬ್ಯಾಂಕಿನ ಲೆಕ್ಕಪತ್ರಗಳನ್ನು ಪರಿಶೀಲನೆ ನಡೆಸಿ ಅಗತ್ಯ ಮಾಹಿತಿಯನ್ನು ಕಲೆಹಾಕಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಗತ್ಯ ಬಂದು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.