ಜಿಲ್ಲೆ

ಎಡಿಜಿಪಿ ವಿರುದ್ಧ ಸರ್ಕಾರ ಕ್ರಮವಹಿಸಲಿ

ಬಳ್ಳಾರಿ : ಲೋಕಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಸಿಬ್ಬಂದಿಗೆ ಬರೆದ ಪತ್ರದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಬಗ್ಗೆ ಪ್ರಸ್ತಾಪಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಸರ್ಕಾರ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಪಕ್ಷದ ಜಿಲ್ಲಾದ್ಯಕ್ಷ ಮೀನಳ್ಳಿ ತಾಯಣ್ಣ ಆಗ್ರಹಿಸಿದರು.
ನಗರದ ಜೆಡಿಎಸ್ ಪಕ್ಷದ ಕಚೇರಿಯಿಂದ ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿ ರಾಜ್ಯ ಲೋಕಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದರು. ಇದು ಅತ್ಯಂತ ಖಂಡನೀಯ, ಕೂಡಲೇ ಲೋಕಾಯುಕ್ತ ಅಧಿಕಾರಿ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಬೇಕು.
ಕೇಂದ್ರ ಸಚಿವ ಅಥವಾ ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಕ್ರಮಕೈಗೊಳ್ಳಲು ಭಾರತೀಯ ಆಡಳಿತ ಸೇವಾ ನಿಯಮಗಳ ಪ್ರಕಾರ ಪ್ರಾಧಿಕಾರದ ಅನುಮತಿ ಪಡೆಯಬೇಕು. ಆದರೆ, ಯಾವುದೇ ಅನುಮತಿ ಪಡೆಯದೇ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ರಾಜ್ಯ ಸರ್ಕಾರ ಅವರ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಳ್ಳದಿರುವುದು ಬೇಸರ ತರಿಸಿದೆ ಎಂದು ಅಕ್ರೋಶ ಹೊರಹಾಕಿದರು.