ಚಾಮರಾಜನಗರ: ಚಾಮರಾಜನಗರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಗೀತಾ ಹುಡೇದ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ಸ್ಥಾನಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಟಿ.ಜವರೇಗೌಡ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಗೀತಾ ಹುಡೇದ ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.