ಮೈಸೂರು: ಎನ್.ಎಸ್. ಸೇವಾ ಟ್ರಸ್ಟ್‌ನಿಂದ ಆ.29 ರಂದು ನಗರದ ಹೊಸಮಠದ ನಟರಾಜ ಕಲ್ಯಾಣ ಮಂಟಪದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಭಾವಿಸ್ ಫೌಂಡೇಷನ್ ಹಾಗೂ ರೋಟರಿ ಪಶ್ಚಿಮ ಸಹಯೋಗದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ಅಗ್ರಹಾರದ ಹೊಸಮಠದ ನಟರಾಜ ಕಲ್ಯಾಣ ಮಂಟಪದಲ್ಲಿ ಮೇಳ ಆಯೋಜಿಸಲಾಗಿದೆ. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ನಿರ್ಮಲ ಆಸ್ಪತ್ರೆಯ ನಿರ್ದೇಶಕ ಡಾ.ಬಸವರಾಜು ಮೇಳ ಉದ್ಘಾಟಿಸುವರು. ಅನಘ ಆಸ್ಪತ್ರೆ ನಿರ್ದೇಶಕ ಡಾ.ಮಹೇಶ್ ಭಾಗವಹಿಸಲಿದ್ದು, ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಶಿವರಾಜಪ್ಪ ಅಧ್ಯಕ್ಷತೆ ವಹಿಸುವರು ಎಂದು ಟ್ರಸ್ಟ್ ಅಧ್ಯಕ್ಷ ಎನ್.ಎಸ್.ನಂಜುಂಡಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇಳದಲ್ಲಿ 70 ಕಂಪನಿಗಳು ಭಾಗವಹಿಸುತ್ತಿದ್ದು, ಎಂಟನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮೊದಲಾದ ವಿದ್ಯಾರ್ಹತೆ ಹೊಂದಿರುವವರು ಭಾಗವಹಿಸಬಹುದು. ಮಾಹಿತಿಗೆ ಮೊ.9743283001 ಸಂಪರ್ಕಿಸಬಹುದು ಎಂದು ತಿಳಿಸಿದರು.
ರೈತಪರ್ವ ಸಂಘಟನೆ ಅಧ್ಯಕ್ಷ ಅರುಣ್ ಕುಮಾರ್, ಟ್ರಸ್ಟ್‌ನ ಚನ್ನಪ್ಪಾಜಿ ಇದ್ದರು.