ಗೋಣಿಕೊಪ್ಪ: ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ಮುಖ್ಯ ಶಿಕ್ಷಕರ ಸಂಘ, ಗೋಣಿಕೊಪ್ಪ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಎನ್‌ಎಂಎಂಎಸ್ ಪರೀಕ್ಷೆ ಪೂರಕ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಎನ್‌ಎಂಎಂಎಸ್ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಿ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿ ಶಿವಕುಮಾರ್ ತರಬೇತಿ ನೀಡಿದರು. ಲೆಕ್ಕ ಮತ್ತು ಸಾಮಾನ್ಯ ಜ್ಞಾನದೊಂದಿಗೆ ಉತ್ತರಿಸುವ ವಿಧಾನ ತಿಳಿಸಿಕೊಡಲಾಯಿತು. ಮಕ್ಕಳ ಪ್ರಶ್ನೆಗೆ ಉತ್ತರಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಮಾಡಲಾಯಿತು. 350 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಸಮನ್ವಯಾಧಿಕಾರಿ ವನಜಾಕ್ಷಿ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಅಮ್ಮಂಡ ಚಿಣ್ಣಪ್ಪ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಘದ ಅಧ್ಯಕ್ಷ ಬಯವಂಡ ಉತ್ತಪ್ಪ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್, ಎಂ.ಎಂ. ಸ್ಮಾರಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮರಿದೇವರು ಇದ್ದರು.