ಚಿತ್ರದುರ್ಗ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿ (ಎನ್‌ಪಿಇಪಿ) ಸಹಪಠ್ಯ ಸ್ಪರ್ಧಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಡಯಟ್‌ನಲ್ಲಿ ಶುಕ್ರವಾರ ಎನ್‌ಪಿಇಪಿ-2023ರ ಸ್ಪರ್ಧಾ ಚಟುವಟಿಕೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಲ್ಲಿ ಜನಪದ ನೃತ್ಯ, ಪಾತ್ರಾಭಿನಯ ಸ್ಪರ್ಧೆ ಆಯೋಜಿಸಬೇಕು. ವೀಕ್ಷಣೆಗೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಪದಾಧಿಕಾರಿಗಳು, ಪೋಷಕರಿಗೆ ಅವಕಾಶ ಕಲ್ಪಿಸಬೇಕು ಎಂದರು.
ನೋಡಲ್ ಅಧಿಕಾರಿ ಎಸ್.ಬಸವರಾಜು ಮಾತನಾಡಿ, ಸ್ಪರ್ಧೆಯೂ 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ, ತಾಲೂಕು, ಜಿಲ್ಲಾ, ಪ್ರಾದೇಶಿಕ, ರಾಜ್ಯ, ರಾಷ್ಟ್ರ ಹೀಗೆ 6 ಹಂತಗಳಲ್ಲಿ ನಡೆಯಲಿದೆ ಎಂದರು.