ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸರಣಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಲಾಯಿತು. 
ಜಿಲ್ಲೆ

ಎನ್‌ಎಚ್-4ನಲ್ಲಿ ಸರಣಿ ಅಪಘಾತ, ಮೂವರಿಗೆ ಗಾಯ

ಹಿರೇಬಾಗೇವಾಡಿ: ಸಮೀಪದ ಸಿದ್ಧನಭಾವಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಟೈರ್ ಸ್ಫೋಟಗೊಂಡು ಕಾರು ಮಗುಚಿ ಬಿದ್ದಿದ್ದರಿಂದ ಹಿಂದೆ ಬಂದ ನಾಲ್ಕು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡು ನೂರಾರು ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಹೆದ್ದಾರಿ ಪೆಟ್ರೋಲಿಂಗ್ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದರು. ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.