ಬಾಗಲಕೋಟೆ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಮಂಗಳವಾರ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಗೌರವ ಸಿಗಲಿ

ಬಾಗಲಕೋಟೆ: ಎಲ್ಲ ಕ್ಷೇತ್ರಗಳಲ್ಲೂ ಇಂದು ಮಹಿಳೆ ಮುಂಚೂಣಿಯಲ್ಲಿದ್ದು, ಇನ್ನೂ ಹೆಚ್ಚಿನ ಅವಕಾಶ ಸಿಕ್ಕು ಮಹಿಳೆಯರನ್ನು ಗೌರವಿಸುವ ಕಾರ್ಯವಾಗಲಿ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ನಗರದ ಬಿವಿವಿ ಮಿನಿ ಸಭಾಭವನದಲ್ಲಿ ಮಂಗಳವಾರ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.

ಭಾರತದಲ್ಲಿ ಮಹಿಳೆಯರೆ ಅಗ್ರಗಣ್ಯ, ದೇಶವನ್ನು ತಾಯಿಯಂದು ಕರೆದ ಭೂಮಿ ನಮ್ಮದು, ಎಲ್ಲಿ ನಾರಿಯರಿಗೆ ಗೌರವ ಸಿಗುತ್ತದೆ ಅಲ್ಲಿ ದೇವತೆಗಳು ಇರುತ್ತಾರೆ ಎಂದು ನಂಬಿದವರು ನಾವು, ದೇಶದಲ್ಲಿ ಇಂದು ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮೂಂಚೂಣಿಯಲ್ಲಿದ್ದಾರೆ. ಅವರಿಗೆ ಎಲ್ಲ ಕ್ಷೇತ್ರಗಳಲ್ಲಿ ಗೌರವ ಸಿಗಲಿ ಎಂದರು.

ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರು ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಅನೇಕ ಯೋಜನೆಗಳ ಜೋತೆ ಅವರಿಗೆ ಶೇ.೩೩ ಮಹಿಳಾ ರಿಜರ್ವೇಶನ ತರುವ ಮೂಲಕ ಗೌರವ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪನವರ ಸರ್ಕಾರದಲ್ಲಿ ಭಾಗ್ಯ ಲಕ್ಷಿ÷್ಮÃ ಯೋಜನೆ ಜಾರಿಗೆ ತರಲಾಯಿತು. ಇದರಿಂದ ಅನೇಕ ಕುಟುಂಬಗಳಿಗೆ ಭದ್ರತೆ ಸಿಕ್ಕಿದೆ ಎಂದು ತಿಳಿಸಿದರು.

ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶಶಿಕಲಾ ಮಜ್ಜಗಿ, ಗ್ರಾಮೀಣ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಪಾತ್ರೊಟಿ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ್, ಜಿಲ್ಲಾ ಉಪಾಧ್ಯಕ್ಷೆ ಭಾಗೀರತಿ ಪಾಟೀಲ, ಸುಜಾತಾ ಶೀಂಧೆ, ಶಿವಲೀಲಾ ಪಟ್ಟಣಶೆಟ್ಟಿ, ಪಾರ್ವತಿ ಹುಗ್ಗಿ, ಡಾ.ರೇಖಾ ಕಲಬುರಗಿ, ಜಯಶ್ರೀ ಏಕಭೋಟೆ, ಲಕ್ಷಿ÷್ಮÃ ಸಿಂತ್ರೆ, ಜ್ಯೋತಿ ಭಜಂತ್ರಿ, ಸ್ಮೀತಾ ಪವಾರ, ಭುವನೇಶ್ವರಿ ಕುಪ್ಪಸ್ತ, ಭಾಗ್ಯಶ್ರೀ ಹಂಡಿ, ಅನಿತಾ ಸರೋದೆ ಇತರರು ಇದ್ದರು.