ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್‌ನಾರಾಯಣ್ ಉದ್ಘಾಟಿಸಿದರು. ಎಸ್.ಪಿ.ಸ್ವಾಮಿ, ಸಿ.ಪಿ.ಉಮೇಶ್, ಬೋರಯ್ಯ, ಹನುಮಂತೇಗೌಡ, ಮನು, ಕೃಷ್ಣೇಗೌಡ ಇದ್ದರು. 
ಜಿಲ್ಲೆ

ಎಲ್ಲ ಸಮುದಾಯದ ಏಳಿಗೆಗಾಗಿ ಶ್ರಮಿಸಿದ ಕೆಂಪೇಗೌಡ

ಮದ್ದೂರು: ನಾಡಪ್ರಭು ಕೆಂಪೇಗೌಡ ರೈತನ ಮಗನಾಗಿ ಜನಿಸಿ ಎಲ್ಲ ಸಮುದಾಯದ ಜನರ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಬಣ್ಣಿಸಿದರು.

ಪಟ್ಟಣದ ಶಿವಪುರ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಾಡಪ್ರಭು ಕೆಂಪೇಗೌಡರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಜನಾಭಿನಂದನಾ ಸಮಾರಂಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡುವ ಜತೆಗೆ 108 ಅಡಿ ಎತ್ತರದ ಸುಂದರವಾದ ಕಂಚಿನ ಪುತ್ಥಳಿ ನಿರ್ಮಿಸಿ ನಾಡಪ್ರಭುವಿನ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದರು.

ಕಾರ್ಯಕ್ರಮದ ಆಯೋಜಕ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿ, ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿಯ ಮೂರ್ತಿ ನಿರ್ಮಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರ ಪಾತ್ರ ಅನನ್ಯ. ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿದ್ದು, ಅವರಿಗೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ನಿವೃತ್ತ ಪ್ರಾಂಶುಪಾಲ ಸಿ.ಆರ್.ರಾಜು, ನಿವೃತ್ತ ಇತಿಹಾಸ ಪ್ರಾಧ್ಯಾಪಕ ಟಿ.ರಾಜು ಕೇಂಪೇಗೌಡ ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಜಿಪಂ ಮಾಜಿ ಸದಸ್ಯರಾದ ಸಿ.ಬೋರಯ್ಯ, ಕೃಷ್ಣೇಗೌಡ, ಮುಖಂಡರಾದ ಡಾ.ಇಂದ್ರೇಶ್, ಅಶೋಕ್ ಜಯರಾಮು, ಗ್ರಾಪಂ ಅಧ್ಯಕ್ಷರಾದ ನಂದೀಶ್‌ಗೌಡ, ಅನಿಲ್‌ಕುಮಾರ್, ಶಂಕರೇಗೌಡ, ಮಹೇಶ್, ತಾಪಂ ಮಾಜಿ ಸದಸ್ಯ ಚಿಕ್ಕಮರಿಯಪ್ಪ, ಟಿಎಪಿಎಂಎಸ್ ಅಧ್ಯಕ್ಷ ಮಹದೇವು, ಮುಖಂಡರಾದ ಫೈಟರ್ ರವಿ, ಕಿಟ್ಟಿ, ಹನುಮಂತೇಗೌಡ, ಮಹೇಂದ್ರಕುಮಾರ್, ಹಾಗಲಹಳ್ಳಿ ರಘು, ಅಣ್ಣೂರು ಮಹೇಂದ್ರ, ಸುಧಾಕರ್, ಅಭಿ, ಮಧು ಇತರರಿದ್ದರು.

ಅದ್ದೂರಿ ಸ್ವಾಗತ: ಇದಕ್ಕೂ ಮುನ್ನ ತೆರೆದ ವಾಹನದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಅಶ್ವತ್ಥ ನಾರಾಯಣ ಅವರನ್ನು ಅಭಿಮಾನಿಗಳು ಜೆಸಿಬಿ ಯಂತ್ರದ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಗೂ ಹೂವುಗಳನ್ನು ಸುರಿಸಿ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಮುಂದಿನ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ಗೆ ಜಯವಾಗಲಿ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.