ವರ್ಗಾವಣೆಯಾದ ಪ್ರಕಾಶ್ ಎಂ.ಚನ್ನಪ್ಪನವರ್ ಹಾಗೂ ನೂತನ ಪೌರಾಯುಕ್ತ ಕೆ.ಎನ್.ಹೇಮಂತ್ ಅವರನ್ನು ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಪೌರಸೇವಾ ನೌಕರರ ಸಂಘದಿಂದ ಸನ್ಮಾನಿಸಲಾಯಿತು. ಹೇಮಂತ್ ಕುಮಾರ್, ಚೇತನ್‌ಕುಮಾರ್, ಸುನಿತಾ ಕುಮಾರಿ, ಸುಹಾಸಿನಿ ಇತರರಿದ್ದರು. 
ಜಿಲ್ಲೆ

ಎಲ್ಲರ ಸಹಕಾರದಿಂದ ಉತ್ತಮ ಕೆಲಸ

ಟಿ.ಎಚ್.ಸಂತೋಷ್ ಕುಮಾರ್

ಭದ್ರಾವತಿ: ಶಿರಸಿಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ.ಚನ್ನಪ್ಪನವರ್ ಹಾಗೂ ನೂತನವಾಗಿ ಅಕಾರ ಸ್ವೀಕರಿಸಿದ ಪೌರಾಯುಕ್ತ ಕೆ.ಎನ್.ಹೇಮಂತ್ ಅವರನ್ನು ಪೌರಸೇವಾ ನೌಕರರ ಸಂಘದಿಂದ ಸನ್ಮಾನಿಸಲಾಯಿತು.

ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಎಂ.ಚನ್ನಪ್ಪನವರ್, ಅಕಾರಿಗಳು ಉತ್ತಮ ಕೆಲಸ ಮಾಡಲು ಕಚೇರಿಯ ಪ್ರತಿಯೊಬ್ಬರ ಸಹಕಾರ ಅಗತ್ಯ. ನಗರಸಭೆ ಸದಸ್ಯರು ಉತ್ತಮ ಸಹಕಾರ ನೀಡಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದರು. ನಾಗರಿಕರು ಸಹ ಸಹಕರಿಸಿದ್ದಾರೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ, ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ನರಸಿಂಹಮೂರ್ತಿ, ತಾಲೂಕು ಅಧ್ಯಕ್ಷ ಎಸ್.ಚೇತನ್‌ಕುಮಾರ್, ನಗರಸಭೆ ಸದಸ್ಯ ಬಿ.ಕೆ.ಮೋಹನ್, ಬಿ.ಟಿ.ನಾಗರಾಜ್, ಬಸವರಾಜ್, ಸುನಿತಾ ಕುಮಾರಿ, ಸುಹಾಸಿನಿ ಇತರರಿದ್ದರು.