ಚಿಕ್ಕಮಗಳೂರು ಜ್ಞಾನರಶ್ಮಿ ಶಾಲೆಯ ಸೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕಗಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆಯಿಂದ ಅಭಿನಂದಿಸಲಾಯಿತು. 
ಜಿಲ್ಲೆ

ಎಸ್.ಎಸ್.ಎಲ್.ಸಿ. ಜ್ಞಾನರಶ್ಮಿ ಸಾಧನೆ : ಸ್ಕೌಟ್ಸ್-ಗೈಡ್ಸ್‌ನಿಂದ ಸನ್ಮಾನ

ನಿತ್ಯಾನಂದ ಎಸ್.ಎನ್.
ಚಿಕ್ಕಮಗಳೂರು: ಜ್ಞಾನರಶ್ಮಿ ಶಾಲೆಯ ಪ್ರತಿಭಾವಂತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ಗಳು ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೦% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆಗೈದ ಹಿನ್ನೆಲೆ ಉಡುಪಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಘಟ ಕದ ವತಿಯಿಂದ ಸನ್ಮಾನಿಸಲಾಯಿತು.

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಹಾಗೂ ಅವರ ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ವಿಶೇಷವಾಗಿ ಪ್ರಶಂಸಿಸಿದರು. ಜ್ಞಾನರಶ್ಮಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದವು ಸಾಧನೆಗೈದ ಹದಿಮೂರು ವಿದ್ಯಾರ್ಥಿಗಳು ನಮಗೆ ಹೆಮ್ಮೆ ತಂದಿದ್ದಾರೆ. ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವ ಶ್ಲಾಘನೀ ಯ. ಅವರ ಮುಂದಿನ ಶೈಕ್ಷಣಿಕ ಪಯಣವು ಯಶಸ್ವಿಯಾಗಲಿ ಎಂದು ಶಾಲೆಯ ಆಡಳಿತಾಧಿಕಾರಿ ಲಿಖಿತ್ ನಂದಕುಮಾರ್ ತಿಳಿಸಿದ್ದಾರೆ.