ಜಿಲ್ಲೆ

ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ ಇನ್ನಿಲ್ಲ

ಮಂಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ (55) ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನರಾದರು.

ಪ್ರಭಾವಿ ನಾಯಕರಾಗಿದ್ದ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.