ಜಿಲ್ಲೆ

ಎಸ್.ಸಿ, ಎಸ್.ಟಿ. ಶಿಕ್ಷಕರ ಸಂಘದ ಚುನಾವಣೆ ಜೂ 10ಕ್ಕೆ

ಬೀದರ್: ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ. ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಜೂನ್ 10 ರಂದು ಬೆಂಗಳೂರಿನ ರಾಜಾಜಿನಗರದ ಕೇಂದ್ರ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.
ಮೇ 17 ರಂದೇ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ಸಂಘದ ಸದಸ್ಯರು ಪದಾಧಿಕಾರಿ ಹುದ್ದೆಗೆ ಸ್ಪರ್ಧಿಸಬಹುದು ಎಂದು ಸಂಘದ ಸಂಘಟನಾ ಕಾರ್ಯದರ್ಶಿ ಗಣಪತಿ ಭಕ್ತಾ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9632318676ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.