ಚಿತ್ರದುರ್ಗ: ನಗರದ ಎಸ್‌ಆರ್‌ಎಸ್ ಪ್ರಥಮ ದರ್ಜೆ ಕಾಲೇಜು ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಆರ್.ಎಸ್. ನಾಜಿಯಾ ಕೌಸರ್ ದಾವಣಗೆರೆ ವಿವಿಯ 2023-24ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ 5 ರ‌್ಯಾಂಕ್(ಶೇ.93)ಪಡೆದಿದ್ದಾರೆ. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಇದೇ ಕಾಲೇಜಿಗೆ 5ನೇ ರ‌್ಯಾಂಕ್ ದೊರಕಿತ್ತು. ವಿದ್ಯಾರ್ಥಿನಿಯ ಈ ಸಾಧನೆಗೆ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಆಡಳಿತಾಧಿಕಾರಿ ಡಾ.ಟಿ.ಎಸ್. ರವಿ, ಪ್ರಾಂಶುಪಾಲ ಜಿ.ಪಿ. ನಂದನ್ ಹರ್ಷ ವ್ಯಕ್ತಪಡಿಸಿದ್ದಾರೆ.