ಚಿತ್ರದುರ್ಗ: ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಶೇ.100 ಫಲಿತಾಂಶ ಸಾಧಿಸಿದೆ.
ವಿದ್ಯಾರ್ಥಿಗಳಾದ ಜಿ.ಎಸ್.ಜೀವನ್ (ಶೇ.96.6), ಎಸ್.ಮೋನಿಕಾ (ಶೇ.95.6), ಕೆ.ಗಂಗೋತ್ರಿ (ಶೇ.95) ಅಗ್ರಸ್ಥಾನ ಅಲಂಕರಿಸಿದ್ದಾರೆ.
ಪರೀಕ್ಷೆ ಬರೆದಿದ್ದ 116 ವಿದ್ಯಾರ್ಥಿಗಳಲ್ಲಿ 15 ಮಕ್ಕಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ‌್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಪ್ರಾಚಾರ‌್ಯ ಎಂ.ಎಸ್.ಪ್ರಭಾಕರ್, ಸಂಯೋಜಕ ಬಿ.ವಿ.ರಾಕೇಶ್ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.