ಚಿತ್ರದುರ್ಗ: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಎಸ್ಸಿ, ಎಸ್ಟಿ ಕಾಲನಿಗಳಲ್ಲಿ ಹಾಗೂ ಈ ಸಮುದಾಯ ಇರುವೆಡೆ ಕಾಮಗಾರಿ ಕೈಗೊಂಡು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಸಂಬಂಧ ಪ್ರಸಕ್ತ ಮೇ ಅಂತ್ಯದವರೆಗಿನ ಪ್ರಗತಿಯ ಕುರಿತು ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಈ ಯೋಜನೆಯಡಿ ಇಲಾಖೆವಾರು ಹಂಚಿಕೆಯಾದ ಅನುದಾನಕ್ಕೆ ಅನುಗುಣವಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ. ಯಾವ ಉದ್ದೇಶಕ್ಕಾಗಿ ಅನುದಾನ ಬಳಸಬೇಕೋ ಅದನ್ನು ಹೊರತುಪಡಿಸಿ ಇನ್ಯಾವುದಕ್ಕೋ ಬಳಸುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಯಾವುದೇ ಕಾರಣಕ್ಕೂ ನಿಯಮ ಮೀರುವಂತಿಲ್ಲ. ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು ಎಂದು ಸೂಚನೆ ನೀಡಿದರು.