ಬೀದರ್: ಸರ್ಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಮೀಸಲು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಗುತ್ತಿಗೆದಾರರ ಬಹು ದಿನಗಳ ಬೇಡಿಕೆ ಈಡೇರಿಸಿದೆ ಎಂದು ಕರ್ನಾಟಕ ರಾಜ್ಯ ಎಸ್.ಸಿ, ಎಸ್.ಟಿ. ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ ಹಾಸನಕರ್ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಮೀಸಲು ಕಾಮಗಾರಿಗಳ ಮೊತ್ತವನ್ನು ರೂ. 50 ಲಕ್ಷದಿಂದ ರೂ. 1 ಕೋಟಿಗೆ ಏರಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ಎಸ್.ಸಿ, ಎಸ್.ಟಿ. ಗುತ್ತಿಗೆದಾರರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಬಜೆಟ್ ಜನಪರ ಬಜೆಟ್ ಆಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.