ಬೆಳಗಾವಿ: ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರ ಉಪನಿಯಮ 17 ರಿತ್ಯಾ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದಿಂದ ಆದೇಶಿಸಿಲಾಗಿದೆ. ಈ ಸಮಿತಿಯಲ್ಲಿ 3 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡದ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ 3 ಎನ್.ಜಿ.ಓ ಗಳ ಅಧೀಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ ಗಳ ಆಸಕ್ತ ಸದಸ್ಯರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ ಗಳ ಆಸಕ್ತ ಸದಸ್ಯರು ಅರ್ಜಿ ನಮೂನೆಗಾಗಿ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರು ಅಥವಾ ಜಿಲ್ಲೆಯ ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ಕಛೇರಿಗಳಿಂದ ಪಡೆದು ಜೂನ್ 5, 2023 ರಂದು ಸಂಜೆ 5.30 ರೊಳಗಾಗಿ ಭರ್ತಿ ಮಾಡಿ, ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.