ಜಿಲ್ಲೆ

ಎಸ್ಸಿ/ಎಸ್ಟಿ ಯುವಜನರಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟಜಾತಿ ಉಪಯೋಜನೆಯಡಿ ಯುವಜನರಿಗೆ ನೀಡಲಾಗುವ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮಗಳಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪರಿಶಿಷ್ಟಜಾತಿಯ ಯುವಜನರಿಗೆ ಉತ್ತೇಜಿಸುವ ಹಿತದೃಷ್ಟಿಯಿಂದ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ಆಯೋಜಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 16 ರಿಂದ 40 ವರ್ಷದೊಳಗಿನ 10ನೇ ತರಗತಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಯುವಜನರಿಗೆ ಡಿ.10 ರಿಂದ 17 ರವರೆಗೆ 8 ದಿನಗಳ ಕಾಲ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ಆಯೋಜನೆ ಮಾಡಲಾಗಿದ್ದು 50 ಶಿಬಿರಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ನಿಗದಿತ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂ. 118 ರಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳೊಂದಿಗೆ ಡಿ.8 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ 08226-224932, ಮೊ.ಸಂ 9844160841 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.