ಜಿಲ್ಲೆ

ಎಸ್ಸಿ-ಎಸ್ಟಿ ಯೋಜನೆ ಅನುಷ್ಠಾನಕ್ಕೆ ಡಿಸಿ ಸೂಚನೆ

ಕೊಪ್ಪಳ: ಎಸ್ಸಿ-ಎಸ್ಟಿ ಅನುದಾನದಲ್ಲಿ ಅನುಮೋದನೆಯಾದ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್ಸಿ-ಎಸ್ಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆಗೆ ಆದ್ಯತೆ ನೀಡಿ. ಕ್ರಿಯಾಯೋಜನೆ ಅನುಮೋದನೆ ಆದ ತಕ್ಷಣ ಮತ್ತು ಅನುದಾನ ಬಿಡುಗಡೆಯಾದ ಕೂಡಲೇ ಯೋಜನೆಗಳನ್ನು ಅನುಷ್ಠಾನಗೊಳಿಸಿ. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ. ಸಕಾರಣವಿಲ್ಲದೆ ವಿಳಂಬ ಮಾಡಬೇಡಿ. ನನೆಗುದಿಗೆ ಬಿದ್ದ ಕಾಮಗಾರಿಗಳ ವಿವರವನ್ನು ಸಕಾರಣ ಸಮೇತ ಸಲ್ಲಿಸಿ. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಅರ್ಹರನ್ನು ಆಯ್ಕೆ ಮಾಡಿ. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಸಕಾಲ ಸೇವೆಗಳನ್ನು ಅವಧಿಯೊಳಗೆ ವಿಲೇವಾರಿ. ಐಪಿಜಿಆರ್‌ಎಸ್ ಅರ್ಜಿಗಳ ವಿವೆಗೆ ಆದ್ಯತೆ ನೀಡಿ. ಸಕಾರಣವಿಲ್ಲದೆ ಅರ್ಜಿ ತಿರಸ್ಕರಿಸಬೇಡಿ. ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಸಕಾಲ ಸೇವೆ ಅರ್ಜಿಗಳನ್ನು ಬೇಗ ಇತ್ಯರ್ಥಗೊಳಿಸುವಂತೆ ನಿರ್ದೇಶಿಸಿದರು. ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಇತರರಿದ್ದರು.