filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (0.4465741, 0.15973958);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46; 
ಜಿಲ್ಲೆ

ಎಸ್ಸಿ ಎಸ್ಟಿ ಹಿತರಕ್ಷಣಾ ಸಮಿತಿ ಸಭೆ ರದ್ದು

*ತಾಲೂಕು ಆಡಳಿತದ ವಿರುದ್ಧ ದಲಿತ ಮುಖಂಡರ ಆಕ್ರೋಶ

*ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ

ಚಾಮರಾಜನಗರ: ದಲಿತರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದ ದಲಿತ ಮುಖಂಡರು ತಾಲೂಕು ಮಟ್ಟದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯನ್ನು ಬಹಿಷ್ಕರಿಸಿದರು.

ನಗರದ ಸತ್ತಿ ರಸ್ತೆಯಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ತಾಲೂಕು ಆಡಳಿತ ದಲಿತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ದಲಿತ ಮುಖಂಡರು ಕಿಡಿಕಾರಿದರು. ಸಭೆಯನ್ನು ಬಹಿಷ್ಕರಿಸಿ , ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿ ನೇತ್ರಾವತಿ ಎಂಬುವವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಗುತ್ತಿಗೆ ಆಧಾರದಲ್ಲಿ ಅವರ ಕುಟುಂಬಕ್ಕೆ ಉದ್ಯೋಗ ನೀಡುತ್ತಿವೆ ಎಂದು ಭರವಸೆ ನೀಡಿ, ಸುಮಾರು 7 ವರ್ಷಗಳಿಂದ ಇದಕ್ಕೆ ನ್ಯಾಯ ಒದಗಿಸಿಲ್ಲ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಅವರ ನಿರ್ಲಕ್ಷ್ಯದಿಂದ ಮತ್ತು ದಲಿತ ವಿರೋಧಿ ನಡೆಯಿಂದ ನೇತ್ರಾವತಿ ಅವರ ಕುಟುಂಬಕ್ಕೆ ಈ ವೆರೆಗೂ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಮಾತನಾಡಿ, ತಾಲೂಕು ಆಡಳಿತದ ವಿರುದ್ಧ ಕಿಡಿಕಾರಿದರು. ಮುಂದಿನ ದಿನಗಳಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇರದ ಪರಿಣಾಮ ಎದುರಿಸುತ್ತದೆ ಎಂದು ಎಚ್ಚರಿಕೆ ನೀಡಿದರು.