ಲಿಂಗಾಯತ ಜಂಗಮರಿಗೆ ಎಸ್ಸಿ ಪ್ರಮಾಣಪತ್ರ ನೀಡಿದ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಅರೋಲಿ, ಪದಾಕಾರಿಗಳಾದ ಚನ್ನಬಸವ ಯಕ್ಲಾಸಪುರ, ಶರಣಪ್ಪ ದಿನ್ನಿ, ಲಕ್ಷ್ಮಣ ಕುರ್ಡಿ, ಪ್ರಕಾಶ, ನರಸಿಂಹಲು, ಹನುಮಂತು ಇದ್ದರು. 
ಜಿಲ್ಲೆ

ಎಸ್ಸಿ ಪ್ರಮಾಣಪತ್ರ ನೀಡಿದ ಅಕಾರಿ ವಿರುದ್ಧ ಕ್ರಮಕೈಗೊಳ್ಳಿ

ರಾಯಚೂರು: ಲಿಂಗಾಯತ ಜಂಗಮರಿಗೆ ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಿರುವ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ನೀಡಿರುವ ಪ್ರಮಾಣಪತ್ರಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಸಮಿತಿ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮಂಗಳವಾರ ಮನವಿ ಸಲ್ಲಿಸಿ, ಸರ್ಕಾರದ ಆದೇಶ ಉಲ್ಲಂಸಿರುವ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಹಾಯಕ ಆಯುಕ್ತರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಜಂಗಮರು ಎಸ್ಸಿ ಜಾತಿ ಪ್ರಮಾಣಪತ್ರ ಪಡೆದುಕೊಳ್ಳಲು ಹಲವು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದು, ದೂರು ಸಲ್ಲಿಸಿದ ನಂತರ ಹಲವರ ಜಾತಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಲಾಗಿದೆ. ಆದರೂ ಕೆಲವು ಅಕಾರಿಗಳು ಏಕಪಕ್ಷೀಯವಾಗಿ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದಾರೆ.
ಕೂಡಲೇ ಲಿಂಗಾಯತ ಜಂಗಮರಿಗೆ ಎಸ್ಸಿ ಪ್ರಮಾಣ ಪತ್ರ ನೀಡಿದ ತಹಸೀಲ್ದಾರ್ ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಈಗಾಗಲೇ ನೀಡಲಾಗಿರುವ ಪ್ರಮಾಣಪತ್ರಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ನಿಯೋಗದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಅರೋಲಿ, ಪದಾಕಾರಿಗಳಾದ ಚನ್ನಬಸವ ಯಕ್ಲಾಸಪುರ, ಶರಣಪ್ಪ ದಿನ್ನಿ, ಲಕ್ಷ್ಮಣ ಕುರ್ಡಿ, ಪ್ರಕಾಶ, ನರಸಿಂಹಲು, ಹನುಮಂತು ಇದ್ದರು.