ಚಾಮರಾಜನಗರ: 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಹಾಜರಾಗಿ ಅನುತ್ತೀರ್ಣಗೊಂಡ ಹಾಗೂ ಪರೀಕ್ಷೆ-1ರಲ್ಲಿ ತೇರ್ಗಡೆಗೊಂಡು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಮೇ 10 ಕಡೆಯ ದಿನವಾಗಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ಶಾಲಾ ಅಭ್ಯರ್ಥಿಗಳು ಪರೀಕ್ಷೆ-2ಕ್ಕೆ ನೋಂದಣಿಯಾಗಲು ಶುಲ್ಕ ವಿನಾಯಿತಿ ಇರುತ್ತದೆ. ಪರೀಕ್ಷೆ-1ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದ್ದಲ್ಲಿ ಪರೀಕ್ಷೆ-2ಕ್ಕೆ ನಿಗದಿತ ಶುಲ್ಕ ಪಾವತಿ ಮಾಡಿ ನೋಂದಾಯಿಸಿಕೊಳ್ಳಬಹುದಾಗಿದೆ. ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ ಅನುತ್ತೀರ್ಣ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ವಿಶೇಷ ತರಗತಿಗೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಮೇ 26 ರಿಂದ ಜೂನ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.