filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5941267, 0.2475);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43; 
ಜಿಲ್ಲೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಬ್ಬದಂತೆ ಆಚರಿಸಿ

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರತಿ ವಿದ್ಯಾರ್ಥಿಗೂ ಜೀವನದ ಪ್ರಮುಖ ಘಟ್ಟ. ಹೀಗಾಗಿ ಮಾ. 21ರಿಂದ ಏ. 4ರ ವರೆಗೆ ನಡೆಯಲಿರುವ ಈ ಬಾರಿಯ ಪರೀಕ್ಷೆಯನ್ನೂ ಹಬ್ಬದಂತೆ ಆಚರಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಸಲಹೆ ನೀಡಿದ್ದಾರೆ.

ಪರೀಕ್ಷೆ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಆತಂಕ ಬೇಡ. ತಮ್ಮ ನಿತ್ಯ ಕಾರ್ಯಗಳ ಜೊತೆಗೆ ಓದುವ ಅವಧಿ ಹೆಚ್ಚಿಸಿಕೊಳ್ಳಿ. ಶಿಕ್ಷಣ ಇಲಾಖೆ ನಡೆಸಿರುವ ವಿಷಯ ಸಾಮರ್ಥ್ಯ ಬೆಳೆಸುವ ಕಾರ್ಯಗಾರ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಗಳು ನಿಮ್ಮನ್ನು ಸಬಲರನ್ನಾಗಿಸಿವೆ. ಆದ್ದರಿಂದ ಸುಲಭವಾಗಿ ಪರೀಕ್ಷೆ ಎದುರಿಸಲು ಸಮರ್ಥರಾಗಿದ್ದೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಸಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಕುರಿತು ಅನಗತ್ಯ ಯೋಚಿಸಬೇಡಿ. ವಿದ್ಯಾರ್ಥಿಗಳ ಒಳಿತಿಗಾಗಿಯೇ ಸರ್ಕಾರ ಈ ವ್ಯವಸ್ಥೆ ಕಲ್ಪಿಸಿದೆ. ಅಭ್ಯಾಸದ ಕಡೆ ಹೆಚ್ಚು ಗಮನಹರಿಸಿ. ಪರೀಕ್ಷೆ ಸಂಬಂಧ ಜಿಲ್ಲಾಡಳಿತ, ಜಿಪಂ ಮಕ್ಕಳ ಸ್ನೇಹಿಯಾಗಿ ಮೂಲಸೌಕರ್ಯ ಒದಗಿಸಲಿದೆ. ಯಾವ ಊಹಾಪೋಹ, ಗೊಂದಲಗಳಿಗೆ ಕಿವಿಗೊಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

30 ನಿಮಿಷ ಮುಂಚೆಯೇ ಕೇಂದ್ರದಲ್ಲಿರಿ. ಆರಂಭವಾದ ನಂತರ 30 ನಿಮಿಷ ತಡವಾಗಿ ಬಂದರೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಪ್ರವೇಶ ಪತ್ರ ನಿಮ್ಮೊಂದಿಗಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಿ. ಮೊದಲು ಪ್ರಶ್ನೆ-ಪತ್ರಿಕೆ ಚೆನ್ನಾಗಿ ಓದಿಕೊಳ್ಳಿ. ಆತ್ಮವಿಶ್ವಾಸದಿಂದ ಬರೆದು, ಜಿಲ್ಲೆಗೆ ಉತ್ತಮ ಫಲಿತಾಂಶ ತನ್ನಿ ಎಂದು ಸಲಹೆ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮಕ್ಕಳಿಗೆ ಮಾತ್ರವಲ್ಲ. ಪಾಲಕರಿಗೂ ಒತ್ತಡದ ಕಾಲ. ಹೀಗಾಗಿ ಮಕ್ಕಳ ಆತಂಕ ದೂರ ಮಾಡಿ. ಧೈರ್ಯ ತುಂಬಿ, ಯಶಸ್ಸಿಗೆ ಪರಿಶ್ರಮ ಮತ್ತು ಪ್ರಯತ್ನ ಎಂಬ ದೃಢ ನಂಬಿಕೆಯನ್ನು ಮೂಡಿಸಿ. ಪೋಷಕಾಂಶವುಳ್ಳ ಆಹಾರ, ಹೆಚ್ಚೆಚ್ಚು ನೀರು ಕುಡಿಯಲು ಸಲಹೆ, ಅಗತ್ಯ ಬೆಂಬಲ, ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.

ನಿಷೇಧಾಜ್ಞೆ ಜಾರಿ: ಜಿಲ್ಲೆಯ 82 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಕೇಂದ್ರಗಳ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಪರೀಕ್ಷಾ ದಿನಗಳಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಜೆರಾಕ್ಸೃ್, ಕಂಪ್ಯೂಟರ್, ಇಂಟರ್‌ನೆಟ್ ಕೇಂದ್ರಗಳನ್ನು ತೆರೆಯುವಂತಿಲ್ಲ. ವಿದ್ಯಾರ್ಥಿಗಳು ಮೊಬೈಲ್ ಸೇರಿ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.