ಜಿಲ್ಲೆ

ಏ.28ರಂದು ನಗರದಲ್ಲಿ ನೇರ ಸಂದರ್ಶನ

ಚಾಮರಾಜನಗರ: ಎಸ್.ಎಂ.ಎಫ್.ಜಿ ಇಂಡಿಯಾ ಕ್ರೆಡಿಟ್ ಲಿ ಚಾಮರಾಜನಗರ ಇವರ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ, ಐ.ಟಿ.ಐ. ಪಿ.ಯು.ಸಿ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಏಪ್ರಿಲ್ 28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಸಲಾಗುವುದು.

ನೇರ ಸಂದರ್ಶನದಲ್ಲಿ 18 ರಿಂದ 30ರ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ-ವಿವರ (ಬಯೋ ಡೇಟಾ) ಮತ್ತು ಅಂಕಪಟ್ಟಿಗಳ ಮೂಲ ಜೆರಾಕ್ಸ್ ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಉದ್ಯೋಗಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ದೂ.ಸಂ 08226-224430 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.