ಜಿಲ್ಲೆ

ಏ.6 ರಂದು ಯುಗಾದಿ ಕವಿಗೋಷ್ಠಿ

ಚಾಮರಾಜನಗರ: ಜಿಲ್ಲಾ ಲೇಖಕರ ಸಂಘದ ವತಿಯಿಂದ ಏ.6 ರಂದು ಯುಗಾದಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಉದ್ಘಾಟಿಸುವರು. ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷ ರೇಚಂಬಳ್ಳಿ ದುಂಡುಮಾದಯ್ಯ ಅಧ್ಯಕ್ಷತೆ ವಹಿಸುವರು.

ಸಿರಿಗನ್ನಡ ವೇದಿಕೆ ರಾಜ್ಯ ಉಪಾಧ್ಯಕ್ಷೆ ಹಾಗೂ ಲೇಖಕಿ ಡಾ.ಸೌಗಂಧಿಕ ವಿ.ಜೋಯಿಸ್, ಲೇಖಕರ ಸಂಘದ ಕಾರ್ಯದರ್ಶಿ ಸೋಮಶೇಖರ ಬಿಸಲವಾಡಿ, ಖಜಾಂಚಿ ಗು.ಚಿ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕವಿಗೋಷ್ಠಿಯಲ್ಲಿ 20 ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.