ಚಾಮರಾಜನಗರ: ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಯೋಜನೆಯಡಿ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏ.7 ರಿಂದ 9 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಪಚ್ಚಪ್ಪ ವೃತ್ತದ ಬಳಿಯ ಪೇಟೆ ಪ್ರೈಮರಿ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಸ್ವ-ಸಹಾಯ ಸಂಘಗಳು ಉತ್ಪಾದಿಸಿರುವ ವಿವಿಧ ರೀತಿಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸ್ವ ಸಹಾಯ ಸಂಘಗಳು ಭಾಗವಹಿಸುತ್ತಿವೆ. ಸಾರ್ವಜನಿಕರು ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸದುಪಯೋಗಪಡಿಸಿಕೊಳ್ಳುಸವಂತೆ ಚಾಮರಾಜನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.