ಜಿಲ್ಲೆ

ಏಕಲವ್ಯ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ:ಹಿರಿಯೂರು ತಾಲೂಕು ದೇವರಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಯ 6ನೇ ತರಗತಿಗೆ ಪ್ರವೇಶಕ್ಕೆ 5ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಜ.31ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 17ರಂದು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು,ಫೆಬ್ರವರಿ 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಮಾರ್ಚ್ 10ರ ನಂತರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಹಾಗೂ ಮೇ 11ರಂದು ಪ್ರವೇಶ ಪ್ರಕ್ರಿಯೆ ಕೊನೆಗೊಳ್ಳಲಿದೆ.

ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ, ಇಲಾಖೆಯ ಮೊಳಕಾಲ್ಮೂರು,ಚಳ್ಳಕೆರೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹೊಸದುರ್ಗ,ಹೊಳಲ್ಕೆರೆ, ಹಿರಿಯೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ದೇವರ ಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅರ್ಜಿ ದೊರೆಯಲಿದೆ. ಗಂಡು ಮತ್ತು ಹೆಣ್ಣು ಮಕ್ಕಳಿಗೆ ತಲಾ 30 ಸೀಟುಗಳು ಲಭ್ಯ ಇವೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.