ಚಾಮರಾಜನಗರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹನೂರು ತಾಲೂಕಿನ ಮಂಗಲ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಗೆ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜ.31ರೊಳಗೆ ಮಂಗಲ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಗೆ ಸಲ್ಲಿಸಬೇಕು. ಪ್ರವೇಶ ಪರೀಕ್ಷೆಯನ್ನು ಫೆ.17 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ಯಾಮ್ಲಾಲ್ (9871248685), ಪಿ.ಜಿ.ಟಿ. ಶಿಕ್ಷಕರಾದ ರೇಖಾ(9211343432) ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.