ಯಾದಗಿರಿ: ಕಲಾನಿಕೇತನ ಟ್ರಸ್ಟ್ ಮತ್ತು ಶಹಾಪುರದ ಅಭಿ ಫೌಂಡೇಶನ್ ಸಹಯೋಗದಲ್ಲಿ ಅ.31ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ತಿಳಿಸಿದರು.
ಚಿತ್ರಕಲಾವಿದ ಮೇಘನಾಥ ಬೆಳ್ಳಿ ಅವರ ಕಲೆ ಹಾಗೂ ಬದುಕು, ಬರಹವನ್ನು ಒಳಗೊಂಡ ಈ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಲಿದ್ದಾರೆ. ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ, ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಮನೋಜ್ ಜೈನ್, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಇತಿಹಾಸ ತಜ್ಞ ಭಾಸ್ಕರ್ರಾವ್ ಮುಡಬೂಳ ಸೇರಿ ಇತರರು ಆಗಮಿಸಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಜಿಲ್ಲೆಯಲ್ಲಿ ಸಾಕಷ್ಟು ಚಿತ್ರಕಲಾವಿದರಿದ್ದಾರೆ. ಅವರಿಗೆ ಸಕರ್ಾರದಿಂದ ಪ್ರೋತ್ಸಾಹ ಸಿಕ್ಕರೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದರು. ಕಲಾವಿದ ಮೇಘನಾಥ ಬೆಳ್ಳಿ ಇತರರು ಇದ್ದರು.