ಜಿಲ್ಲೆ

ಐ.ಎ.ಎಸ್, ಕೆ.ಎ.ಎಸ್ ತರಬೇತಿಗೆ ಅರ್ಜಿ ಆಹ್ವಾನ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗ ನಡೆಸಲಿರುವ ಐ.ಎ.ಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.

ಮೈಸೂರಿನ ಮುಕ್ತ ವಿವಿ ಯ ಕೇಂದ್ರ ಕಚೇರಿಯಲ್ಲಿ ತರಬೇತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏ. 9ರೊಳಗೆ ಬೆಳಿಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ದೂ.ಸಂ 0821-2515944 ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ವಿ.ವಿ. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.