ಜಿಲ್ಲೆ

ಐದು ವರ್ಷವೂ ಸಿದ್ದರಾಮಯ್ಯ ಸಿಎಂ

ಚಿತ್ರದುರ್ಗ: ಜನೋಪಯೋಗಿ ಪಂಚ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಆ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಖಂಡಿತ ಎಂಬ ಬಿಜೆಪಿ-ಜೆಡಿಎಸ್‌ ನಾಯಕರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯ ಪಾಕಿಸ್ತಾನ, ಶ್ರೀಲಂಕಾ ಮಾದರಿಯಲ್ಲಿ ದಿವಾಳಿ ಆಗಲಿದೆ ಎಂಬುದಾಗಿ ಬಿಜೆಪಿಗರು ಹೇಳಿದ್ದರು. ಎಲ್ಲಿಯಾದರೂ ಆಗಿದೆಯೇ ಎಂದು ಪ್ರಶ್ನಿಸಿದರು.