ಜಿಲ್ಲೆ

ಐಸಿಸಿ ಸಭೆ ರದ್ದತಿಗೆ ಆಗ್ರಹ

ದಾವಣಗೆರೆ: ಭದ್ರಾ ನೀರು ಹರಿಸುವ ವೇಳಾಪಟ್ಟಿ ಪರಿಷ್ಕರಿಸಲು ಸೆ.6 ರಂದು ಕರೆದಿರುವ ಐಸಿಸಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರದ್ದುಪಡಿಸಿ ಜಿಲ್ಲೆಯ ರೈತರ ಹಿತ ಕಾಯಬೇಕು ಎಂದು ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಒತ್ತಾಯಿಸಿದ್ದಾರೆ.

ಆಗಸ್ಟ್ 10 ರಿಂದ ಭದ್ರಾ ನಾಲೆಗಳಿಗೆ ನಿರಂತರ 100 ದಿನಗಳವರೆಗೆ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಆದ್ದರಿಂದ ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಎಕರೆ ಜಮೀನಿನಲ್ಲಿ ಭತ್ತದ ನಾಟಿ ಮಾಡಲಾಗಿದೆ. ರೈತರು ಸಾಲ ಮಾಡಿ ಭತ್ತದ ನಾಟಿಗೆ ಈಗಾಗಲೇ 2 ಬಾರಿ ಗೊಬ್ಬರ ಹಾಕಿದ್ದಾರೆ. ಸಾಕಷ್ಟು ಬಂಡವಾಳ ಸುರಿದಿದ್ದಾರೆ. ಆದರೆ ಶಿವಮೊಗ್ಗ ಜಿಲ್ಲೆಯ ರೈತರ ಒತ್ತಡಕ್ಕೆ ಮಣಿದು ನೀರು ಹರಿಸುವ ವೇಳಾಪಟ್ಟಿ ಪರಿಷ್ಕರಿಸಲು ನೀರಾವರಿ ಸಲಹಾ ಸಮಿತಿ ಸಭೆ ಕರೆದಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ----