ಜಿಲ್ಲೆ

ಒಂದು ದಿನಕ್ಕೆ ಸೀಮಿತ ಬೇಡ

ಚಿತ್ರದುರ್ಗ: ಸರ್ವರೋಗ ನಿವಾರಣೆಗೂ ಯೋಗ ರಾಮಬಾಣವಿದ್ದಂತೆ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಹೇಳಿದರು.
ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿ, ಯೋಗಾಭ್ಯಾಸ ಜೂ.21ಕ್ಕೆ ಸೀಮಿತವಾಗಬಾರದು. ನಿತ್ಯವೂ ಕೆಲ ಸಮಯವನ್ನು ಯೋಗಕ್ಕೆ ಮೀಸಲಿಟ್ಟಾಗ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದರು.
ಸಂಸ್ಥೆ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ, ಮಕ್ಕಳಿಗೆ ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ತಿಳಿಸಬೇಕು. ಒತ್ತಡದ ಜೀವನದಲ್ಲಿ ಬದುಕುತ್ತಿರುವ ಎಲ್ಲರಿಗೂ ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಯೋಗಪಟು ಸುನಿಲ್‌ಕುಮಾರ್, ಮೇಘನಾ, ಕೆ.ಎಂ.ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.