ಜಿಲ್ಲೆ

ಒಂದು ನಿಲ್ದಾಣ, ಒಂದು ಉತ್ಪನ್ನಕ್ಕೆ ಸಿಇಓ ಚಾಲನೆ

ಬಾಗಲಕೋಟೆ: ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಹಾಕಲಾದ ಗದ್ದನಕೇರಿಯ ಸಂಜೀವಿನಿ ಹೊಸಬೆಳಕು ಮಹಿಳಾ ಸ್ವ-ಸಹಾಯ ಸಂಘದಿಂದ ತಯಾರಿಸಲ್ಪಟ್ಟ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಜಿ.ಪಂ ಸಿಇಓ ಶಶಿಧರ ಕುರೇರ ಗುರುವಾರ ಚಾಲನೆ ನೀಡಿದರು.

ದೀನ್ ದಯಾಳ ಅಂತೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯಡಿ ತೆರೆಯಲಾದ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವ-ಸಹಾಯ ಸಂಘಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇಂತದೊಂದು ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ರೈಲ್ವೆ ಸ್ಟೇಷನ್ ಸುಪರಿಟೆಂಡೆಂಟ್ ಸಂಜಯ ಕುಮಾರ, ಸಂಜೀವಿನ ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ವಿದ್ಯಾ ಭಾವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.