ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11ರಂದು ಮಧ್ಯಾಹ್ನ 4ಕ್ಕೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ "ಒನಕೆ ಓಬವ್ವ ಜಯಂತ್ಯೋತ್ಸವ' ಕಾರ್ಯಕ್ರಮ ಆಯೋಜಿಸಲಾಗಿದೆ.
ಮಧ್ಯಾಹ್ನ 3ಕ್ಕೆ ನಗರದ ಬಿ.ಜಿ.ಎಸ್ ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಚರ್ಚ್ ವೃತ್ತ, ಅಶೋಕ ರಸ್ತೆ ಮೂಲಕ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಜನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ಏರ್ಪಡಿಸಲಾಗಿದೆ.