ಜಿಲ್ಲೆ

ಒಳ ಮೀಸಲಾತಿ ಜಾರಿಗಾಗಿ ಅ. 16 ರಂದು ಪ್ರತಿಭಟನೆ

ಬಳ್ಳಾರಿ : ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ಅ. 16 ರಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಫಾರಿ ಕರ್ಮಚಾರಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ ಹೇಳಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಿರಂತರ ಹೋರಾಟದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಸುಪ್ರೀಂ ಕೋರ್ಟ್ ಆಯಾ ರಾಜ್ಯದವರಿಗೆ ಒಳಮಿಸಲಾತಿಯನ್ನು ನೀಡಲು ಆದೇಶ ಮಾಡಿದೆ. ಆದರೆ, ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಆದೇಶ ಮಾಡಿ ಮೂರು ತಿಂಗಳು ಕಳೆದರೂ ಕರ್ನಾಟಕದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡದೆ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಕಿಡಿ ಕಾರಿದರು. ಅಲ್ಲದೆ, ಜತೆಗೆ ರಾಜ್ಯದಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಉಪಚುನಾವಣೆ ಬರಲಿದೆ. ಅಷ್ಟರಲ್ಲಿ ಒಳಮೀಸಲಾತಿ ಜಾರಿಮಾಡಿ ಬ್ಯಾಕ್ ಲಾಗ್ ಹುದ್ದೆಯನ್ನು ತುಂಬಬೇಕು. ಈಗಾಗಲೇ ಸರ್ಕಾರದ ಹೋರಾಟ ನಡೆಸಲು ನಿರ್ಧರಿಸಿದ್ದು, ಅ. 16 ರಂದು ರಾಜ್ಯದ ಎಲ್ಲ ಡಿಸಿ ಕಚೇರಿ ಮುಂಭಾಗದಲ್ಲಿ ಹೋರಾಟ ನಡೆಸಲಾಗುವುದು ಎಂದರು. ಪ್ರಮುಖರಾದ ಎ. ಈಶ್ವರಪ್ಪ, ಸಿ. ಸೋಮಶೇಖರ, ವಿಜಯ ಕುಮಾರ್, ರಮೇಶ್, ಅರುಣಾಚಲ, ದಾನಪ್ಪ, ಮಲ್ಲಿಕಾರ್ಜುನ, ನಾಗರಾಜ್ ಇದ್ದರು.